ಸಾರಾಂಶ
ಕೋಳಿ ತ್ಯಾಜ್ಯವನ್ನು ಮನಸೋ ಇಚ್ಚೆ ಸುರಿಯುತ್ತಿರುವುದರಿಂದ ಗಬ್ಬುನಾರುತ್ತಿದ್ದು ವಾಹನ ಸವಾರರು ಹಾಗೂ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ.
ಕನ್ನಡಪ್ರಭ ವಾರ್ತೆ ತಿಪಟೂರು
ನಗರದ ಗಾಂಧಿನಗರದಿಂದ ಸುಕ್ಷೇತ್ರ ಕೆರೆಗೋಡಿ-ರಂಗಾಪುರ ಸೇರಿದಂತೆ ವಿವಿಧ ಪುಣ್ಯ ಕ್ಷೇತ್ರಗಳಿಗೆ ಹಾಗೂ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಅಕ್ಕಪಕ್ಕದಲ್ಲಿ ಕೆಲವರು ಕೋಳಿ ತ್ಯಾಜ್ಯವನ್ನು ಮನಸೋ ಇಚ್ಚೆ ಸುರಿಯುತ್ತಿರುವುದರಿಂದ ಗಬ್ಬುನಾರುತ್ತಿದ್ದು ವಾಹನ ಸವಾರರು ಹಾಗೂ ಪಾದಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ.ಯಾತ್ರಾಸ್ಥಳಗಳಾದ ಕೆರೆಗೋಡಿ-ರಂಗಾಪುರ, ದಸರೀಘಟ್ಟ ಶ್ರೀ ಚೌಡೇಶ್ವರಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸಲಿದ್ದು ಪ್ರತಿದಿನ ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದು ಹೋಗುತ್ತಾರೆ. ಅಲ್ಲದೆ ಶಾಲಾ-ಕಾಲೇಜುಗಳ ಮಕ್ಕಳು ಸಹ ಇದೇ ರಸ್ತೆಯಲ್ಲಿ ಓಡಾಡಬೇಕಿದೆ. ಆದರೆ ಕೆಲವರು ಇದೇ ರಸ್ತೆಯ ಇಕ್ಕೆಲಗಳಲ್ಲಿ ಕೋಳಿ ತ್ಯಾಜ್ಯ, ಮನೆಗಳಲ್ಲಿ ಉಪಯೋಗಿಸಿ ಬಿಸಾಡಿದ ರಾಶಿ ರಾಶಿ ಕಸವನ್ನು ರಾತ್ರಿ ವೇಳೆ ತಂದು ಸುರಿಯುತ್ತಿದ್ದಾರೆ. ಇದರಿಂದ ಹಂದಿ, ನಾಯಿಗಳ ಹಾವಳಿ ಹೆಚ್ಚಾಗಿದ್ದು ಕೋಳಿ ಮಾಂಸದ ತ್ಯಾಜ್ಯವನ್ನು ತಿನ್ನಲು ಹಿಂಡು ಹಿಂಡಾಗಿ ಬರುವುದರಿಂದ ವಾಹನಗಳಿಗೆ ಅಡ್ಡ ಬಂದು ಸವಾರರು ಎದ್ದುಬಿದ್ದು ಹೋಗುವಂತಾಗಿದೆ. ಈ ಬಗ್ಗೆ ಹಲವಾರು ಬಾರಿ ನಗರಸಭೆ ಗಮನಕ್ಕೆ ತರಲಾಗಿದ್ದರೂ ಪ್ರಯೋಜನವಾಗಿಲ್ಲ. ಈ ಬಗ್ಗೆ ನಗರಸಭೆ ಅಗತ್ಯ ಕ್ರಮಕೈಗೊಳ್ಳಬೇಕೆಂದು ವಾಹನ ಸವಾರರು ಹಾಗೂ ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.
)
;Resize=(128,128))
;Resize=(128,128))