ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆಯಲ್ಲಿ ವ್ಯತ್ಯಾಸ ಕಂಡುಬರುತ್ತಿದ್ದರೂ, ಯಾವುದೇ ಗೊಂದಲವಿಲ್ಲದೆ ದರ್ಶನ ವ್ಯವಸ್ಥೆ ಸುಗಮವಾಗಿ ನಡೆಯುತ್ತಿದೆ. ಧರ್ಮದರ್ಶನದ ಕೌಂಟರ್ ಮೂಲಕ ಪ್ರತಿ ನಿಮಿಷಕ್ಕೆ ೨೫೦ರಿಂದ ೨೬೭ ಭಕ್ತರು ಸಾಗುತ್ತಿದ್ದು, ದಿನವೊಂದಕ್ಕೆ ಸುಮಾರು ೨.೫ ಲಕ್ಷ ಭಕ್ತರಿಗೆ ದರ್ಶನ ಕಲ್ಪಿಸುವ ಸಾಮರ್ಥ್ಯದ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾದಲ್ಲಿ ಕಾಯುವ ಅವಧಿ ಐದರಿಂದ ಆರು ಗಂಟೆಗಳವರೆಗೆ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.
ಹಾಸನ: ಹಾಸನಾಂಬೆ ದರ್ಶನೋತ್ಸವಕ್ಕೆ ನಾಲ್ಕು ದಿನಗಳಲ್ಲಿ 8 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಹಾಗೆಯೇ ಟಿಕೆಟ್ ಹಾಗೂ ಲಾಡು ಪ್ರಸಾದದ ಮಾರಾಟದಿಂದ ₹ 6.5 ಕೋಟಿ ರು. ಆದಾಯ ಸಂಗ್ರಹವಾಗಿದೆ.
ಸೋಮವಾರವೂ ಬೆಳಗ್ಗಿನಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಧರ್ಮದರ್ಶನ ಹಾಗೂ ೩೦೦ ಟಿಕೆಟ್ ದರ್ಶನದ ಸರತಿ ಸಾಲುಗಳಲ್ಲಿ ಗಂಟೆಗಟ್ಟಲೆ ನಿಂತು ದೇವಿಯ ದರ್ಶನ ಪಡೆದರು. ಧರ್ಮದರ್ಶನಕ್ಕೆ ಸುಮಾರು ಮೂರು ಗಂಟೆ ಹಾಗೂ ೩೦೦ ಟಿಕೆಟ್ ದರ್ಶನಕ್ಕೆ ಎರಡೂವರೆ ಗಂಟೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ೧,೦೦೦ ಟಿಕೆಟ್ ದರ್ಶನದ ಸಾಲಿನಲ್ಲಿ ಭಕ್ತರ ಸಂಖ್ಯೆ ಕಡಿಮೆ ಕಂಡುಬಂತು. ಮಧ್ಯಾಹ್ನ ೨ ರಿಂದ ೩ ಗಂಟೆಯವರೆಗೆ ದೇವಿಗೆ ನೈವೇದ್ಯ ಅರ್ಪಿಸುವ ಧಾರ್ಮಿಕ ವಿಧಿವಿಧಾನಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬಳಿಕ ಮತ್ತೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆಯಲ್ಲಿ ವ್ಯತ್ಯಾಸ ಕಂಡುಬರುತ್ತಿದ್ದರೂ, ಯಾವುದೇ ಗೊಂದಲವಿಲ್ಲದೆ ದರ್ಶನ ವ್ಯವಸ್ಥೆ ಸುಗಮವಾಗಿ ನಡೆಯುತ್ತಿದೆ. ಧರ್ಮದರ್ಶನದ ಕೌಂಟರ್ ಮೂಲಕ ಪ್ರತಿ ನಿಮಿಷಕ್ಕೆ ೨೫೦ರಿಂದ ೨೬೭ ಭಕ್ತರು ಸಾಗುತ್ತಿದ್ದು, ದಿನವೊಂದಕ್ಕೆ ಸುಮಾರು ೨.೫ ಲಕ್ಷ ಭಕ್ತರಿಗೆ ದರ್ಶನ ಕಲ್ಪಿಸುವ ಸಾಮರ್ಥ್ಯದ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾದಲ್ಲಿ ಕಾಯುವ ಅವಧಿ ಐದರಿಂದ ಆರು ಗಂಟೆಗಳವರೆಗೆ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ಹಾಸನಾಂಬೆ ದೇವಿಯ ದರ್ಶನ ಹಾಗೂ ಲಾಡು ಪ್ರಸಾದ ಮಾರಾಟದಿಂದ ಈವರೆಗೆ ಒಟ್ಟು ೬.೫ ಕೋಟಿ ಆದಾಯ ಸಂಗ್ರಹವಾಗಿದೆ. ನವೆಂಬರ್ ೬ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನವೆಂಬರ್ ೮ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇವಿಯ ದರ್ಶನ ಪಡೆಯಲಿದ್ದಾರೆ ಎಂದು ತಿಳಿಸಿದರು.ಇದೇ ವೇಳೆ, ದೇವಿಯ ದರ್ಶನ ಪಡೆದ ಭಕ್ತರು ಮಹಾನಗರ ಪಾಲಿಕೆಯ ವಸ್ತುಪ್ರದರ್ಶನ ಮೈದಾನದಲ್ಲಿ ಆಯೋಜಿಸಿರುವ ಕಬಡ್ಡಿ, ನಾಡಕುಸ್ತಿ, ವಾಲಿಬಾಲ್, ಟಗರು ಪ್ರದರ್ಶನ ಹಾಗೂ ಶ್ವಾನ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ವೀಕ್ಷಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು.