1977ರ ಬಳಿಕ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಒಕ್ಕಲಿಗರೊಬ್ಬರು ಗೆಲ್ಲಲಿದ್ದಾರೆ: ಸಿದ್ದರಾಮಯ್ಯ

| Published : Apr 03 2024, 01:33 AM IST

1977ರ ಬಳಿಕ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಒಕ್ಕಲಿಗರೊಬ್ಬರು ಗೆಲ್ಲಲಿದ್ದಾರೆ: ಸಿದ್ದರಾಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ನಮ್ಮದೇ ತಪ್ಪುಗಳಿಂದ ಕೈತಪ್ಪಿದೆ. ಈಗಲೂ ಚಾಮುಂಡೇಶ್ವರಿ ಜನ ನಮ್ಮ ಪರವಾಗಿದ್ದಾರೆ. ನಮ್ಮ ತಪ್ಪುಗಳನ್ನು ಸರಿ ಮಾಡಿಕೊಳ್ಳುವುದು ನಮಗೆ ಗೊತ್ತಿದೆ. ಕ್ಷೇತ್ರದ ಮತದಾರರು ನಮ್ಮ ಪರವಾಗಿದ್ದಾರೆ. ನಾವು ನಮ್ಮ ಕ್ಷೇತ್ರದ ಪರವಾಗಿ ನಿಲ್ಲಬೇಕು. ಲೋಕಸಭೆ ಚುನಾವಣೆಯಲ್ಲಿ ನಮ್ಮ ಸಾಮರ್ಥ್ಯ ತೋರಿಸಬೇಕು

ಕನ್ನಡಪ್ರಭ ವಾರ್ತೆ ಮೈಸೂರು

1977ರ ಬಳಿಕ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಒಕ್ಕಲಿಗರೊಬ್ಬರು ಗೆಲ್ಲಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರಿನ ಜೆ.ಪಿ. ಪ್ಯಾಲೇಸ್ ಹೊಟೇಲ್ ಸಭಾಂಗಣದಲ್ಲಿ ಮಂಗಳವಾರ ನಡೆದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಒಲವು ಇದೆ. ಮೋದಿ ಅಲೆ ದುರ್ಬೀನು ಹಾಕಿ ಹುಡುಕಿದರೂ ಕಾಣುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ನಮ್ಮದೇ ತಪ್ಪುಗಳಿಂದ ಕೈತಪ್ಪಿದೆ. ಈಗಲೂ ಚಾಮುಂಡೇಶ್ವರಿ ಜನ ನಮ್ಮ ಪರವಾಗಿದ್ದಾರೆ. ನಮ್ಮ ತಪ್ಪುಗಳನ್ನು ಸರಿ ಮಾಡಿಕೊಳ್ಳುವುದು ನಮಗೆ ಗೊತ್ತಿದೆ. ಕ್ಷೇತ್ರದ ಮತದಾರರು ನಮ್ಮ ಪರವಾಗಿದ್ದಾರೆ. ನಾವು ನಮ್ಮ ಕ್ಷೇತ್ರದ ಪರವಾಗಿ ನಿಲ್ಲಬೇಕು. ಲೋಕಸಭೆ ಚುನಾವಣೆಯಲ್ಲಿ ನಮ್ಮ ಸಾಮರ್ಥ್ಯ ತೋರಿಸಬೇಕು ಎಂದು ಅವರು ಕರೆ ನೀಡಿದರು.

2013- 18ರವರೆಗೆ ನಾನು ಮುಖ್ಯಮಂತ್ರಿಯಾಗಿ ಎಷ್ಟು ಕೆಲಸ ಮಾಡಿದ್ದೆ. ಇಡೀ ರಾಜ್ಯದಲ್ಲಿ ಅನ್ನಭಾಗ್ಯದಿಂದ ರೈತರ ಸಾಲ ಮನ್ನಾವರೆಗೂ ಎಷ್ಟೆಷ್ಟು ಕೆಲಸ ಮಾಡಿದ್ವಿ. ಆದರೂ ನಮಗೆ 2018ರಲ್ಲಿ ಹಿನ್ನಡೆಯಾಗಿದ್ದು ನೋವು ತಂದಿದೆ ಎಂದು ಅವರು ಭಾವನಾತ್ಮಕವಾಗಿ ನುಡಿದರು.

ಚಾಮುಂಡೇಶ್ವರಿ ಕ್ಷೇತ್ರದ ಜನ ತೀರ್ಮಾನಿಸಿದರೇ ಬಿಜೆಪಿ ಕತೆ ಮುಗಿಯತ್ತೆ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆಯೇ ಇಲ್ಲ. ಇಲ್ಲಿ ಬಿಜೆಪಿ ಠೇವಣಿಯನ್ನು ಕಳೆದುಕೊಂಡಿರುವ ಉದಾಹರಣೆಯೇ ಹೆಚ್ಚು. ಆದರೆ, ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿರುವ ಕೆಲಸಗಳು ಕಣ್ಣಿಗೆ ಕಾಣುತ್ತಿವೆ. ಆದ್ದರಿಂದ ಚಾಮುಂಡೇಶ್ವರಿ ಕ್ಷೇತ್ರದ ಜನ ತೀರ್ಮಾನ ಮಾಡಿದರೆ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕತೆ ಮುಗಿಯತ್ತೆ ಎಂದು ಅವರು ಹೇಳಿದರು.

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ. ಲಕ್ಷ್ಮಣ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್, ನಗರಾಧ್ಯಕ್ಷ ಆರ್. ಮೂರ್ತಿ, ಮುಖಂಡರಾದ ಮಾವಿನಹಳ್ಳಿ ಸಿದ್ದೇಗೌಡ ಮೊದಲಾದವರು ಇದ್ದರು.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ನಮ್ಮದೇ ತಪ್ಪುಗಳಿಂದ ಕೈತಪ್ಪಿತು. ಈಗಲೂ ಚಾಮುಂಡೇಶ್ವರಿ ಜನ ನಮ್ಮ ಪರವಾಗಿದ್ದಾರೆ. ನನಗೆ ಮರ್ಯಾದೆ ಕೊಡಬೇಕೆಂದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಎಂ. ಲಕ್ಷ್ಮಣ ಅವರಿಗೆ ಅತಿ ಹೆಚ್ಚು ಲೀಡ್ ಕೊಡಿ.

- ಸಿದ್ದರಾಮಯ್ಯ, ಮುಖ್ಯಮಂತ್ರಿ