ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಏ. 23 ಮತ್ತು 24 ರಂದು 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಗೋಪಾಲ ಗೌಡ ಕಲ್ವ ಮಂಜಲಿ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಕೋಡಿರಂಗಪ್ಪ ತಿಳಿಸಿದರು.ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಏ.23 ರಂದು ಕನ್ನಡ ಭವನ ಉದ್ಘಾಟನೆ ಏ.23 ರಂದು ನಡೆಯಲಿದ್ದು, ನಂತರ 2 ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುವುದು ಎಂದರು.
ಗಣ್ಯರಿಗೆ, ಸಾರ್ವಜನಿಕರಿಗೆ ಆಹ್ವಾನಶಿಷ್ಟಾಚಾರದಂತೆ ಜಿಲ್ಲೆಯ ಜನಪ್ರತಿನಿಧಿಗಳಿಗೆ, ಗಣ್ಯ ವ್ಯಕ್ತಿಗಳಿಗೆ, ಹಿರಿಯ ಅಧಿಕಾರಿಗಳಿಗೆ, ಕನ್ನಡ ಪರ ಸಂಘಗಳು ಹಾಗೂ ಇತರೆ ಸರ್ಕಾರೇತರ ಸಂಘ, ಸಂಸ್ಥೆ ಗಳ ಸದಸ್ಯರು, ಪದಾಧಿಕಾರಿಗಳಿಗೆ, ಸಾರ್ವಜನಿಕರಿಗೆ ಆಹ್ವಾನ ನೀಡಿದ್ದು, ಅಧಿಕಾರಿಗಳು, ಎಲ್ಲಾ ಕನ್ನಡಪರ ಸಂಘಟನೆಗಳು, ಸಾರ್ವಜನಿಕ ರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಈ ವೇಳೆ ಮನವಿ ಮಾಡಿದರು.
23ರಂದು ಧ್ವಜಾರೋಹಣಏ. 23 ರಂದು ಬೆಳಿಗ್ಗೆ 8.30 ಕ್ಕೆ ಕನ್ನಡ ಭವನ ಮುಂಭಾಗದಲ್ಲಿ ರಾಷ್ಟ್ರಧ್ವಜ, ನಾಡ ಧ್ವಜ, ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಗಳ ಧ್ವಜಾರೋಹಣ ಮಾಡಲು ತೀರ್ಮಾನಿಸಲಾಗಿದ್ದು, ರಾಷ್ಟ್ರಧ್ವಜವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ರವರು ಧ್ವಜಾರೋಹಣ ಮಾಡಲಿದ್ದಾರೆ, ನಾಡ ಧ್ವಜವನ್ನು ಶಾಸಕ ಪ್ರದೀಪ್ ಈಶ್ವರ್ ಹಾಗೂ ಪರಿಷತ್ತಿನ ಧ್ವಜವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾದ ತಾವು ನೆರವೇರಿಸುವುದಾಗಿ ತಿಳಿಸಿದರು. ಅಂದು 9.15ಕ್ಕೆ ನಗರದ ಅಂಬೇಡ್ಕರ್ ಭವನದಿಂದ ಸಮ್ಮೇಳನಾಧ್ಯಕ್ಷ ಗೋಪಾಲ ಗೌಡ ಕಲ್ವ ಮಂಜಲಿಯವರನ್ನು ಮೆರವಣಿಗೆಯ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಕನ್ನಡದ ಜೈಕಾರ ಹಾಗೂ ಕಲಾತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ ನಡೆಯಲಿದೆ, ಅಂಬೇಡ್ಕರ್ ವೃತ್ತದ ಮುಖಾಂತರ ಕನ್ನಡ ಭವನದ ವರೆಗೆ ಮೆರವಣಿಗೆ ನಡೆಸಲಾಗುವುದು.
ಚುಂಚಶ್ರೀ, ಸಚಿವರ ಉಪಸ್ಥಿತಿಎರಡು ದಿನಗಳ ಕಾರ್ಯಕ್ರಮದದಲ್ಲಿ ಆದಿ ಚುಂಚನ ಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದ ನಾಥ ಸ್ವಾಮೀಜಿ, ಸಚಿವ ಡಾ. ಎಂ.ಸಿ. ಸುಧಾಕರ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ, ಮಾಜಿ ಸಂಸದ ಡಾ.ಎಂ.ವೀರಪ್ಪ ಮೊಯ್ಲಿ, ಶಾಸಕ ಪ್ರದೀಪ್ ಈಶ್ವರ್, ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ, ನಿಕಟ ಪೂರ್ವ ಸಮ್ಮೇಳನಾಧ್ಯಕ್ಷ ನಾಡೋಜ ಎಸ್. ಷಡಕ್ಷರಿ, ಸರ್ವಾಧ್ಯಕ್ಷ ಗೋಪಾಲ ಗೌಡ ಕಲ್ವ ಮಂಜಲಿ, ಸಂಸದರಾದ ಡಾ. ಕೆ.ಸುಧಾಕರ್, ಎಂ. ಮಲ್ಲೇಶ್ ಬಾಬು ಉಪಸ್ಥಿತರಿರಲಿದ್ದಾರೆ.
ಅಲ್ಲದೆ ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ಚಿದಾನಂದ ಎಂ. ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ಎನ್. ರಮೇಶ್, ನಗರ ಸಭೆ ಅಧ್ಯಕ್ಷ ಎ. ಗಜೇಂದ್ರ, ಉಪಾಧ್ಯಕ್ಷ ಜೆ.ನಾಗರಾಜ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್.ಮಂಜುಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ಎಂ.ವಿ. ವೆಂಕಟೇಶ್, ಕರ್ನಾಟಕ ಗೃಹ ಮಂಡಳಿ ಆಯುಕ್ತೆ ಕವಿತಾ ಎಸ್. ಮನ್ನಿಕೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಕೆ.ಎಂ. ಗಾಯಿತ್ರಿ, ಜಂಟಿ ನಿರ್ದೇಶಕ ಅಶೋಕ್ ಎನ್. ಛಲವಾದಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಮತ್ತು ಎಲ್ಲಾ ತಾಲೂಕುಗಳ ಕಸಾಪ ಪದಾಧಿಕಾರಿಗಳು ಇದ್ದರು.