ಸೊಳ್ಳೆಗಳ ಉತ್ಪತ್ತಿ ವ್ಯಾಪಕ: ಜನರಲ್ಲಿ ಡೆಂಘೀ ಜ್ವರದ ಆತಂಕಚರಂಡಿಗಳಲ್ಲಿ ತ್ಯಾಜ್ಯ ಸಮೇತ ನೀರು ನಿಂತುಕೊಂಡಿದ್ದು, ಇದೇ ವೇಳೆ ವಿವಿಧ ಬಡಾವಣೆಗಳಲ್ಲಿ ಚರಂಡಿಯ ನೀರು ಕುಡಿಯುವ ನೀರಿನ ಪೈಪ್ ಲೈನ್‌ಗಳಿಗೆ ಮಿಶ್ರಣವಾಗುತ್ತಿರುವ ಆತಂಕ ವ್ಯಕ್ತವಾಗುತ್ತಿದೆ. ಮತ್ತೊಂದೆಡೆ ಕೇವಲ ಜಾಗೃತಿ ಕಾರ್ಯಕ್ರಮಗಳಿಗೆ ಸೀಮಿತವಾಗಿರುವ ಸ್ಥಳೀಯ ಆಡಳಿತ ಸಂಸ್ಥೆಗಳು, ಕಾಲ ಕಾಲಕ್ಕೆ ಚರಂಡಿಗಳ ಸ್ವಚ್ಛತೆ ಮತ್ತು ತ್ಯಾಜ್ಯ ವಿಲೇವಾರಿ ಕಾರ್ಯ ಕೈಗೊಳ್ಳದಿರುವುದು ಮತ್ತು ಸೊಳ್ಳೆಗಳ ಉತ್ಪತ್ತಿಗೆ ಕಡಿವಾಣ ಹಾಕದಿರುವುದು ಹೆಚ್ಚು ಜನರು ಅನಾರೋಗ್ಯಕ್ಕೆ ಗುರಿಯಾಗಲು ಪ್ರಮುಖ ಕಾರಣವಾಗಿದೆ.