ಸಮತೋಲನ ಆರೋಗ್ಯಕ್ಕಾಗಿ ಸಿರಿಧಾನ್ಯ ಬಳಸಿಸಿರಿಧಾನ್ಯಗಳ ಬೆಳೆ ನಮ್ಮ ದೇಶೀಯ ವ್ಯವಸಾಯ ಪದ್ಧತಿಯಾಗಿದೆ.ಈ ಪದ್ಧತಿಗೆ ಸುಮಾರು 5 ಸಾವಿರ ವರ್ಷಗಳ ಇತಿಹಾಸವಿದ್ದು, ನಮ್ಮ ದೇಶದ ವಿವಿಧ ರಾಜ್ಯಗಳಲ್ಲಿ ಬೆಳೆಯಲಾಗುತ್ತಿದೆ. ಮನುಷ್ಯನ ಸುಸ್ಥಿರ ಆರೋಗ್ಯ ಕಾಪಾಡಲು ರಾಗಿ, ನವಣೆ, ಹಾರಕ, ಸಾಮೆ, ನೆಲ್ಲಕ್ಕಿ, ಬರುಗು, ಕೊರಲೆ, ಊದಲು, ಸಜ್ಜೆ ಮತ್ತು ಜೋಳ ಹೀಗೆ ಹಲವಾರು ಬಗೆಯ ಸಿರಿಧಾನ್ಯಗಳಲ್ಲಿನ ಪೌಷ್ಠಿಕಾಂಶಗಳು ಸಹಕಾರಿಯಾಗಿವೆ. ಇವುಗಳಲ್ಲಿ ಫೈಬರ್, ಕ್ಯಾಲ್ಸಿಯಂ ಮತ್ತು ಖನಿಜಾಂಶ ಸಮೃದ್ಧವಾಗಿರುತ್ತವೆ