ಜನತೆಯ ಕಣ್ಣಲ್ಲಿ ನೀರು ತರಿಸುತ್ತಿರುವ ಈರುಳ್ಳಿ ಬೆಲೆದೀಪಾವಳಿ ಹಬ್ಬದ ಸಂದರ್ಭದಲ್ಲಿ ಏರುಗತಿಯಲ್ಲಿದ್ದ ಈರುಳ್ಳಿ ಬೆಲೆ, ಇದೀಗ ಹಬ್ಬ ಕಳೆದರೂ ಇಳಿಮುಖವಾಗದೇ ಜನತೆಯ ಕಣ್ಣಲ್ಲಿ ನೀರು ತರಿಸುತ್ತಿದೆ. ಚಿಕ್ಕಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ)ಯಲ್ಲಿ ಕಳೆದ ಹಲವು ದಿನಗಳಿಂದ ಈರುಳ್ಳಿ ಬೆಲೆ ಏರುಗತಿಯಲ್ಲೇ ಸಾಗುತ್ತಿದೆ. ಸಗಟು ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ. ಈರುಳ್ಳಿ 50 ರಿಂದ 65 ರು. ಆಗಿದೆ. ಜತೆಗೆ ಚಿಲ್ಲರೆ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ 70 ರಿಂದ 80 ರು.ವರೆಗೂ ಮಾರಾಟವಾಗುತ್ತಿದೆ.