ಲಿಂಗ ಸಮಾನತೆ ಪ್ರತಿಪಾದಿಸಲು ಪಣ ತೊಡೋಣ: ನ್ಯಾ. ನೇರಳೆ ವೀರಭದ್ರಯ್ಯ ಭವಾನಿಪ್ರತಿ ವ್ಯಕ್ತಿಯ ಜೀವನದಲ್ಲಿ ಮಹಿಳೆಯ ಪಾತ್ರ ತುಂಬಾ ದೊಡ್ಡದಿದೆ. ಆಕೆ ತಾಯಿಯಾಗಿ, ಸೋದರಿಯಾಗಿ, ಪತ್ನಿಯಾಗಿ ಬಾಳಿಗೆ ಬೆಳಕಾಗುತ್ತಾಳೆ. ವೈಯಕ್ತಿಕವಾಗಿ ಮನೆಯ ಅರ್ಧ ಜವಾಬ್ದಾರಿಯನ್ನು ಹೊರುವ ಜೊತೆಗೆ ಒಬ್ಬ ಶಿಕ್ಷಕಿಯಾಗಿ, ಇಂಜಿನಿಯರ್ ಆಗಿ, ಪೈಲೆಟ್ ಆಗಿ, ನ್ಯಾಯಾಧೀಶೆಯಾಗಿ, ಪೊಲೀಸ್ ಆಗಿಯೂ ಕೂಡ ತನ್ನ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾಳೆ.