ಹಕ್ಕಿಜ್ವರ: ಸಂತೆ ನಿಷೇಧ ಜಿಲ್ಲಾಧಿಕಾರಿ ವಿವೇಚನೆಗೆಹಕ್ಕಿ ಜ್ವರವು ಎಚ್5ಎನ್1 ವೈರಸ್ ನಿಂದ ಹರಡುವ ರೋಗವಾಗಿದ್ದು, ಇದು ಟರ್ಕಿ ಕೋಳಿ, ಕೋಳಿ, ಗಿನಿ ಕೋಳಿ, ಬಾತುಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಬರುವ ಸಾಂಕ್ರಾಮಿಕ ಖಾಯಿಲೆಯಾಗಿದೆ. ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಮ್ಮೆ ರೋಗಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ.