ನಂದಿ ಗಿರಿ ಪ್ರದಕ್ಷಿಣೆಗೆ ಭಕ್ತಸಾಗರಪ್ರತಿ ವರ್ಷ ಆಷಾಢ ಮಾಸದ ಕೊನೆ ಸೋಮವಾರ ದಿಬ್ಬಗಿರಿ, ಬ್ರಹ್ಮಗಿರಿ, ನಂದಿಗಿರಿ (ನಂದಿಬೆಟ್ಟ), ಚೆನ್ನಗಿರಿ, ಗೋರ್ವಧನ ಗಿರಿ ಸೇರಿದಂತೆ ಪಂಚಗಿರಿಗಳನ್ನು ಭಕ್ತಿಯಿಂದ ಪ್ರದಕ್ಷಿಣೆ ಮಾಡಿದರೆ ಕೈಲಾಸ ಪರ್ವತವನ್ನು ಸುತ್ತಿದಷ್ಟೇ ಪುಣ್ಯ ದೊರೆಯುತ್ತದೆ ಎಂಬ ನಂಬಿಕೆ ಈ ಭಾಗದ ಆಸ್ತಿಕರಲ್ಲಿದೆ.   ಭಕ್ತರು ವಿವಿಧ ಭಜನಾ ತಂಡಗಳೊಂದಿಗೆ ಹಾಡುತ್ತ ಹೆಜ್ಜೆ ಹಾಕುತ್ತಾರೆ.