ಪರಿಶಿಷ್ಟ ಜಾತಿ ಸಮೀಕ್ಷೆ ಅವಧಿ 28ರ ವರೆಗೆ ವಿಸ್ತರಣೆ ಗಣತಿದಾರರು ಮೇ 26, 27 ಮತ್ತು 28ನೇ ತಾರೀಕುಗಳಂದು ನಡೆಯುವ ವಿಶೇಷ ಶಿಬಿರದಲ್ಲಿ ಖುದ್ದಾಗಿ ಉಪಸ್ಥಿತರಿದ್ದು, ಮನೆ ಮನೆ ಸಮೀಕ್ಷೆಯಲ್ಲಿ ಆಕಸ್ಮಿಕವಾಗಿ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಶಿಬಿರಕ್ಕೆ ಆಗಮಿಸಿದಾಗ ಸಮರ್ಪಕವಾಗಿ ಹಾಗೂ ಸೂಸೂತ್ರವಾಗಿ ಸಮೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು