ಬೇಡಿಕೆ ಈಡೇರಿಸಲು ಮಸಣ ಕಾರ್ಮಿಕರ ಆಗ್ರಹಸ್ಮಶಾನಗಳಲ್ಲಿ ಮೃತರ ಶವ ಸಂಸ್ಕಾರ ಮಾಡಲು ಪ್ರತಿ ಗ್ರಾಮದಲ್ಲೂ ಮಸಣ ಕಾರ್ಮಿಕರಿದ್ದಾರೆ. ಆದರೆ ಅವರು ಒಂದು ಸೇವೆಯಾಗಿ ಕೆಲಸ ಮಾಡುತ್ತಿದ್ದು, ಸರಕಾರದಿಂದ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ಹಾಗಾಗಿ ನಿವೇಶನ, ವಸತಿ ರಹಿತ ಕಾರ್ಮಿಕರನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸಬೇಕು. ಈ ಬಗ್ಗೆ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ.