ಮಕ್ಕಳಿಗೆ ಸಂಸ್ಕಾರ, ಮೌಲ್ಯಗಳನ್ನು ಕಲಿಸಬೇಕು ಶಾಲೆಯಲ್ಲಿ ಮಕ್ಕಳು ಕಲಿಯುವುದಕ್ಕಿಂತ ಹೆಚ್ಚು ಮನೆ ಹಾಗೂ ಸಮಾಜದಿಂದ ಕಲಿಯುತ್ತವೆ. ಹಾಗಾಗಿ ಉತ್ತಮ ನಡತೆ, ಆಚಾರ, ವಿಚಾರ ಮುಂತಾದ ಸಂಗತಿಗಳು ಸಿಗುವ ಹಾಗೆ ನೋಡಿಕೊಳ್ಳಬೇಕು. ಬಾಲ್ಯದಲ್ಲಿ ಕಲಿತದ್ದು ಕಟ್ಟಡಕ್ಕೆ ಅಡಿಪಾಯದಂತೆ ಜೀವನದಲ್ಲಿ ಭವಿಷ್ಯಕ್ಕೆ ನೆರವಾಗುತ್ತದೆ. ಮಕ್ಕಳಿಗೆ ಚಿಕ್ಕಂದಿನಿಂದಲೇ ಸಂಸ್ಕಾರ, ಮೌಲ್ಯಗಳನ್ನು ಕಲಿಸಬೇಕು.