ತರಕಾರಿ ಬೆಲೆಯು ಏರಿಕೆಯಾಗಿದ್ದು, ಸರ್ಕಾರ ನೀಡುವ ಅನುದಾನದಲ್ಲಿ ತರಕಾರಿ ಖರೀದಿ ಸಲು ಸಾಧ್ಯವಾಗದೆ ತಮ್ಮ ಜೇಬಿನಿಂದ ಹಣ ವೆಚ್ಚ ಮಾಡಿ ಶಿಕ್ಷಕರು ತರಕಾರಿ ಖರೀದಿಸುತ್ತಿದ್ದಾರೆ. ಸರ್ಕಾರ, ಅಕ್ಷರ ದಾಸೋಹ ಇಲಾಖೆಯ ಮೂಲಕ ಬಿಸಿಯೂಟಕ್ಕಾಗಿ ಅಕ್ಕಿ, ಬೇಳೆ, ಅಡುಗೆ ಅನಿಲ, ಗೋಧಿ, ಎಣ್ಣೆ, ಸರಬರಾಜು ಮಾಡುತ್ತಿದೆ.
ನಂದಿ ಬೆಟ್ಟದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಬಾಗೇಪಲ್ಲಿ ಹೆಸರನ್ನು ‘ಭಾಗ್ಯನಗರ’ ಎಂಬುದಾಗಿ ಮರುನಾಮಕರಣ ಹಾಗೂ 189 ಕೋಟಿ ರು.ಗಳ ವೆಚ್ಚದ ಗಂಟ್ಲಮಲ್ಲಮ್ಮ ಅಣೆಕಟ್ಟು ನಿರ್ಮಾಣ ಮಾಡುವುದಾಗಿ ಘೋಷಿಸಿದ ಬಳಿಕ ವಿವಿಧ ಸಂಘಟನೆಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದವು.
ಕೋಲಾರ ಜಿಲ್ಲೆಯಿಂದ ಬೇರ್ಪಟ್ಟು ಚಿಕ್ಕಬಳ್ಳಾಪುರ ಪ್ರತ್ಯೇಕ ಜಿಲ್ಲೆಯಾಗಿ 18 ವರ್ಷ ಕಳೆದರೂ ಚಿಕ್ಕಬಳ್ಳಾಪುರ ಜಿಲ್ಲೆಯ ಸಾರಿಗೆ ಇಲಾಖೆಯ ನೌಕರರು ಕೋಲಾರ ಜಿಲ್ಲೆಯಿಂದಲೇ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.