ಸಮಾನತೆ ಸಾಧಿಸಲು ಎಲ್ಲರಿಗೂ ಶಿಕ್ಷಣ ಅಗತ್ಯಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ , ಅಸಮಾನತೆಯಿದೆ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಲು ಸಾಧ್ಯ. ಬುದ್ಧ, ಬಸವಾದಿ ಶರಣರು, ಮಹಾತ್ಮ ಗಾಂಧೀಜಿಯವರ ಸಮಾನ ಸಮಾಜದ ಕನಸು ಈಡೇರಬೇಕಿದೆ.