ಅರ್ಥ ವ್ಯವಸ್ಥೆಗೆ ಹೊಸರೂಪ ನೀಡಿದ ಡಾ.ಸಿಂಗ್ ಡಾ.ಮನಮೋಹನ್‌ಸಿಂಗ್ ಸುಧಾರಣೆಗಳು ಭಾರತವನ್ನು ದಿವಾಳಿತನದಿಂದ ರಕ್ಷಿಸಿದವು ಮಾತ್ರವಲ್ಲದೇ , ದೇಶದ ಆರ್ಥಿಕ ಅಭಿವೃದ್ಧಿಯ ಪಥವನ್ನು ಏರುತ್ತಿರುವ ಜಾಗತಿಕ ಶಕ್ತಿಯಾಗಿ ಮರು ವ್ಯಾಖ್ಯಾನಿಸುವಂತೆ ಮಾಡಿದವು. ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿಂಗ್, ಸತತ ಎರಡು ಅವಧಿಗೆ ಸೇವೆ ಸಲ್ಲಿಸಿದ್ದಾರೆ.