ಜಿಲ್ಲೆಗೆ ಎತ್ತಿನಹೊಳೆ ನೀರು ಬಂದೇ ಬರುತ್ತದೆಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಎತ್ತಿನ ಹೊಳೆಯ ಸುಮಾರು 16 ಟಿಎಂಸಿ ನೀರನ್ನು ಬಿಡುಗಡೆ ಮಾಡಲಿದ್ದೇವೆ. ನಮ್ಮ ಬಳಿ 22 ಟಿಎಂಸಿ ನೀರು ಶೇಖರಣೆ ಆಗಲಿದೆ. ಈ ಮೂರು ಜಿಲ್ಲೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಈ ನೀರನ್ನು ಮೊದಲು ಕುಡಿಯುವ ನೀರಿಗೆ ಹೆಚ್ಚು ಆದ್ಯತೆ ನೀಡುತ್ತೇವೆ.