ದರ ಕುಸಿತ: ಮಾರುಕಟ್ಟೆಯಲ್ಲೇ ಕೊಳೆಯುತ್ತಿದೆ ಹೂ ರಾಶಿಕಳೆದ ಒಂದೂವರೆ ತಿಂಗಳ ಹಿಂದೆ ಅದರಲ್ಲೂ ವರಮಹಾಲಕ್ಷ್ಮೀ ಹಬ್ಬಕ್ಕೆ ಭಾರೀ ಏರಿಕೆ ಕಂಡಿದ್ದ ಹೂವಿನ ದರ, ಗೌರಿ ಗಣೇಶ ಹಬ್ಬದಲ್ಲಿ ಪರವಾಗಿಲ್ಲ ಎಂಬ ದರಕ್ಕೆ ಬಿಕರಿಯಾಗಿ, ಈಗ ಪಿತೃಪಕ್ಷದಲ್ಲಿ ಪಾತಾಳಕ್ಕೆ ಕುಸಿದಿದೆ. ಮಾರುಕಟ್ಟೆಗೆ ಹೂ ತಂದ ರೈತರು ಹೂ ಖರೀದಿ ಮಾಡೋವರಿಲ್ಲದೆ ಎಲ್ಲಂದರಲ್ಲಿ ಬಿಸಾಡಿ ಹೋಗುತ್ತಿದ್ದಾರೆ.