ನಗರವನ್ನು ಸ್ವಚ್ಛಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯ: ಪೌರಾಯುಕ್ತೆ ಗೀತಾಪ್ರತಿ ಮನೆ ಮನೆಗೂ ಭೇಟಿ ನೀಡಿ ಸೊಳ್ಳೆಗಳು ಉತ್ಪತ್ತಿ ಆಗುವ ಪ್ರದೇಶಗಳನ್ನು ನಾಶಪಡಿಸುವ ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಮಾಡಲಾಗುತ್ತಿದೆ. ಖಾಲಿ ನಿವೇಶನಗಳಲ್ಲಿನ ಶುಭ್ರತೆಯನ್ನು ನಿವೇಶನದ ಯಜಮಾನರು ಸ್ವಚ್ಛ ಮಾಡಿಸಲು ಈಗಾಗಲೇ ಸೂಚಿಸಲಾಗಿದೆ. ಎಲ್ಲೆಡೆ ಡೆಂಘೀ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದ್ದು, ತಾಲೂಕಿನಲ್ಲಿ 12 ಪ್ರಕರಣಗಳು ದಾಖಲಾಗಿವೆ, ಯಾವುದೇ ಸಾವು ಸಂಭವಿಸಿಲ್ಲ.