ಅಂಗನವಾಡಿ ಕೇಂದ್ರಗಳಲ್ಲಿ ನಡೆಯುವ ಅವ್ಯವಹಾರ ತಡೆಗಟ್ಟಿ: ಶಾಸಕಿ ರೂಪಕಲಾ ಶಶಿಧರ್ ಸೂಚನೆತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಹೋಗಲು ಪಡಿತರ ಚೀಟಿ ಅತ್ಯಗತ್ಯವಾದ ದಾಖಲೆಯಾಗಿದ್ದು, ಅಂತಹ ಪ್ರಕರಣಗಳನ್ನು ಆದ್ಯತೆ ಮೇರೆಗೆ ಪರಿಗಣಿಸಿ, ತ್ವರಿತವಾಗಿ ಪಡಿತರ ಚೀಟಿ ವಿತರಿಸಲು ಕ್ರಮ ವಹಿಸಬೇಕು. ಶಾಲಾ- ಕಾಲೇಜುಗಳ ಪ್ರವೇಶಕ್ಕಾಗಿ ಪಡಿತರ ಚೀಟಿಗೆಂದು ಬರುವವರಿಗೂ ವಿನಃಕಾರಣ ಕಚೇರಿ ಸುತ್ತ ಅಲೆದಾಡಿಸದೇ ಶೀಘ್ರವೇ ಪಡಿತರ ಚೀಟಿಗಳನ್ನು ವಿತರಿಸಬೇಕು.