ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಚುನಾವಣಾ ಆಯೋಗದ ಆದೇಶದಂತೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025 ಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಡಳಿತ ಪ್ರಕಟಿಸಿದ್ದು, ಜಿಲ್ಲೆಯಲ್ಲಿ ಪುರಷರಿಗಿಂತ ಮಹಿಳಾ ಮತದಾರರೇ ಅಧಿಕ ಸಂಖ್ಯೆಯಲ್ಲಿದ್ದಾರೆ.ಜಿಲ್ಲೆಯ 5 ಕ್ಷೇತ್ರಗಳ ವಿಧಾನಸಭಾ ಕ್ಷೇತ್ರಗಳ ಆರು ತಾಲೂಕುಗಳಲ್ಲಿನ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನಂತರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ. ಜಿಲ್ಲಾದ್ಯಂತ 10,59,981 ಮಂದಿ ಮತದಾರರು ಇದ್ದು,ಇದರಲ್ಲಿ 5,22,298 ಪುರುಷ ಮತದಾರರು, 5,37,593 ಮಹಿಳಾ ಮತದಾರರು ಮತ್ತು 90ಮಂದಿ ಇತರರು ಇದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ತಿಳಿಸಿದರು.
ಹತ್ತು ಸಾವಿರ ಹೊಸ ಮತದಾರರುನಗರ ಹೊರವಲಯದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಟಿಯಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿ, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ 20,016 ಮಂದಿ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದ್ದು, 9931 ಮತದಾರರು ಬೇರಡೆ ತಮ್ಮ ಹೆಸರು ವರ್ಗಾಯಿಸಿ ಕೊಂಡಿದ್ದಾರೆ. ಕಳೆದ ಜನವರಿಯಿಂದ ಇದುವರೆಗೂ ಒಟ್ಟು 10,085 ಮತದಾರರು ಹೆಚ್ಚಾಗಿದ್ದಾರೆ ಎಂದರು. ಭಾರತ ಚುನಾವಣಾ ಆಯೋಗದ ಇತ್ತೀಚಿನ ತಿದ್ದುಪಡಿ ನಿಯಮಗಳಂತೆ ಪ್ರಸ್ತುತ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು 4 ಅರ್ಹತಾ ದಿನಾಂಕಗಳನ್ನು ನಿಗಧಿಪಡಿಸಲಾಗಿದೆ. ಪ್ರಸಕ್ತ 2025ರ ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ 1ನೇ, ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್-2025ಕ್ಕೆ 18 ವರ್ಷ ತುಂಬುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದರು. ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕರಡು ಮತದಾರರ ಪಟ್ಟಿಯ ಬಗ್ಗೆ ಯಾವುದಾದರು ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 28 ರ ಒಳಗಾಗಿ ಸಂಬಂಧಪಟ್ಟ ಮತಗಟ್ಟೆ ಅಧಿಕಾರಿ, ತಹಶೀಲ್ದಾರ್ , ಪೌರಾಯುಕ್ತರು , ಸಹಾಯಕ ಮತದಾರರ ನೋಂದಾಣಾಧಿಕರಿಗಳಿಗೆ ಮತ್ತು ಉಪವಿಭಾಗಾಧಿಕಾರಿ, ಮುಖಾಂತರ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮತದಾರರ ಸಹಾಯವಾಣಿ 1950 ಅಥವಾ ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ರವರ ಅಂತರ್ಜಾಲ www.ceokarnataka.kar.nic.in . (ವೆಬ್‌ಸೈಟ್) ನಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ಹೆಸರುಗಳ ಸೇರ್ಪಡೆ. ತಿದ್ದುಪಡಿ. ತೆಗೆದು ಹಾಕಲು. ವರ್ಗಾವಣೆಗಾಗಿ ಅರ್ಜಿ ಸಲ್ಲಿಸಲು ಮತ್ತು ಇ-ಎಪಿಕ್ (ಭಾವಚಿತ್ರವುಳ್ಳ ಮತದಾರರ ಗುರುತಿನ ಚೀಟಿ) ಅನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.
ಸುದ್ದಿಗೋಷ್ಠಿಯಲ್ಲಿ ಉಪ ವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಚುನಾವಣಾ ತಹಸೀಲ್ದಾರ್ ಕೆ.ಶ್ವೇತಾ, ವಾರ್ತಾ ಮತ್ತು ಸಂಪರ್ಕಇಲಾಖೆಯ ಸಹಾಯಕ ನಿರ್ಧೇಶಕ ಜುಂಜಣ್ಣ, ಮತ್ತಿತರರು ಇದ್ದರು.