ಜಿಲ್ಲೆಯಾದ್ಯಂತ ಸಂಭ್ರಮದಿಂದ ನಡೆದ ಗೌರಿ - ಗಣೇಶ ಹಬ್ಬಚಿಕ್ಕಮಗಳೂರು, ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳ ಕಾಲ ಗೌರಿ - ಗಣೇಶ ಹಬ್ಬ ಸಂಭ್ರಮದಿಂದ ನಡೆಯಿತು. ಆದರೆ, ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಳೆ ಅಡ್ಡಿ ಪಡಿಸಿದೆ. ಮಲೆನಾಡಿನ ಹಲವೆಡೆ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ಮೆರವಣಿಗೆ, ಉತ್ಸವಕ್ಕೂ ಅಡ್ಡಿಯಾಗಿದೆ.