ಸೆಂಟ್ ಸ್ಪ್ರೇ ಮಾಡಿ ಹಸುವಿನ ಬಾಲಕ್ಕೆ ಬೆಂಕಿ ಹಚ್ಚಿದ ಬಾಲಕ

| N/A | Published : Oct 06 2025, 12:00 PM IST

Cow

ಸಾರಾಂಶ

ಹಸುವಿನ ಬಾಲಕ್ಕೆ ಸೆಂಟ್ ಸ್ಪ್ರೇ ಮಾಡಿ ಲೈಟರ್‌ನಿಂದ ಬಾಲಕನೋರ್ವ ಬೆಂಕಿ ಹಚ್ಚಿದ ಘಟನೆ ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ನಡೆದಿದೆ. 16 ವರ್ಷದ ಬಾಲಕನ ಕೃತ್ಯ ಎಸಗಿದ್ದು ಆತನ ವಿರುದ್ಧ ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದೆ.

ಚಿಕ್ಕಮಗಳೂರು :  ಹಸುವಿನ ಬಾಲಕ್ಕೆ ಸೆಂಟ್ ಸ್ಪ್ರೇ ಮಾಡಿ ಲೈಟರ್‌ನಿಂದ ಬಾಲಕನೋರ್ವ ಬೆಂಕಿ ಹಚ್ಚಿದ ಘಟನೆ ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ನಡೆದಿದೆ.16 ವರ್ಷದ ಬಾಲಕನ ಕೃತ್ಯ ಎಸಗಿದ್ದು ಆತನ ವಿರುದ್ಧ ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದೆ. ಅ.3ರಂದು ಸಂಜೆಯ ವೇಳೆ ರಸ್ತೆಯಲ್ಲಿ ಹಸು ನಿಂತಿತ್ತು. ಆಗ ಬಾಲಕ ತನ್ನ ಕೈಯಲ್ಲಿದ್ದ ಸೆಂಟ್ ಸ್ಪ್ರೇಯನ್ನು ಹಸುವಿನ ಬಾಲಕ್ಕೆ ಹೊಡೆದು ಬೆಂಕಿ ಹಚ್ಚಿದ್ದಾನೆ. 

ಈ ದೃಶ್ಯ ಕಂಡ ಸ್ಥಳೀಯರು ತಕ್ಷಣ ಬಾಲಕನನ್ನು ಹಿಡಿದು ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ ಘಟನೆ ತಿಳಿದು ಸ್ಥಳಕ್ಕೆ ಧಾವಿಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಬಾಲಕನ ಹುಚ್ಚಾಟಕ್ಕೆ ಕೋಪಗೊಂಡು ಆತನಿಗೆ ಥಳಿಸಿರುವ ಆರೋಪ ಕೇಳಿ ಬಂದಿದೆ. ಘಟನೆ ಬಗ್ಗೆ ಮಾಹಿತಿ ದೊರೆತ ಬಸವನಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಹಸುವಿಗೆ ಬೆಂಕಿ ಹಚ್ಚಿದ ಕುರಿತು ಬಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರಿದಿದೆ.

*ಸಂಜೆಯ ವೇಳೆ ರಸ್ತೆಯಲ್ಲಿ ನಿಂತಿದ್ದ ಹಸು

*ಹಸು ಬಾಲಕ್ಕೆ ಸೆಂಟ್‌ ಹೊಡೆದ ಬಾಲಕ

*ಬಳಿಕ ಲೈಟರ್‌ನಿಂದ ಬೆಂಕಿ ಹಚ್ಚಿದ

*ತಕ್ಷಣ ಆತನನ್ನು ಹಿಡಿದ ಸ್ಥಳೀಯರು

*ಸ್ಥಳಕ್ಕೆ ಬಂದ ಹಿಂದು ಕಾರ್ಯಕರ್ತರು

*ಬಾಲಕನಿಗೆ ಕಾರ್ಯಕರ್ತರಿಂದ ಹಲ್ಲೆ?

*ಬಾಲಕನ ವಶಕ್ಕೆ ಪಡೆದ ಪೊಲೀಸರು

Read more Articles on