ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರಿಂದ ಕಚೇರಿ, ಮನೆ ಮುತ್ತಿಗೆ ಯತ್ನಚಿಕ್ಕಮಗಳೂರು, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಹೇಳಿಕೆಯನ್ನು ತಿರುಚಲಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರೆ, ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್‌ನಲ್ಲಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ.ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಗುರುವಾರ ನಡೆಯಿತು.