ತರೀಕೆರೆ: ಅಮೃತ್ 2.0 ಯೋಜನೆಯಡಿ ಕೆರೆಗಳ ಅಭಿವೃದ್ಧಿತರೀಕೆರೆ, ಅಮೃತ್ 2.0 ಯೋಜನೆಯ ಜಲಮೂಲಗಳ ಪುನಶ್ಚೇತನ ಮತ್ತು ಉದ್ಯಾನವನಗಳ ಅಭಿವೃದ್ಧಿಗಾಗಿ ರಾಜ್ಯಮಟ್ಟದ ಉನ್ನತ ಅಧಿಕಾರ ಸಮಿತಿ ಸಭೆಯಲ್ಲಿ ತಯಾರಿಸಿರುವ ಕ್ರಿಯಾ ಯೋಜನೆಯಂತೆ ಪುರಸಭೆ ವ್ಯಾಪ್ತಿಯ ಚಿಕ್ಕಕೆರೆ, ದೊಡ್ಡಕೆರೆ ಹಾಗೂ ದಳವಾಯಿ ಕೆರೆಗಳನ್ನು ಅಭಿವೃದ್ಧಿ ಪಡಿಸಲು ಸೋಮವಾರ ನಡೆದ ಪುರಸಭೆಯ ವಿಶೇಷ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.