ಆರೋಗ್ಯ ಇಲಾಖೆಯ ಸಲಹೆ ತಪ್ಪದೆ ಪಾಲಿಸಬೇಕು: ನ್ಯಾ. ಹನುಮಂತಪ್ಪಚಿಕ್ಕಮಗಳೂರು, ಗರ್ಭಿಣಿಯರು, ಬಾಣಂತಿಯರು ಪೌಷ್ಠಿಕ ಆಹಾರದ ಕೊರತೆಯಿಂದ ರಕ್ತಹೀನತೆ, ಅಪೌಷ್ಠಿಕತೆಯಿಂದ ಬಳಲದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಆರೋಗ್ಯ ಇಲಾಖೆ ಸಲಹೆಗಳನ್ನು ತಪ್ಪದೆ ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಕರೆ ನೀಡಿದರು.