ಒಳ ಮೀಸಲಾತಿ ಜಾರಿಗೆ ಕಾಲಹರಣದ ತಂತ್ರ: ಮಾರಸಂದ್ರ ಮುನಿಯಪ್ಪಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸುಪ್ರೀಂ ಕೋರ್ಟಿನ ತೀರ್ಪಿನಂತೆ ಒಳ ಮೀಸಲಾತಿ ಜಾರಿ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯವನ್ನು ಸ್ವಾಗತಿಸುತ್ತೇವೆ. ಆದರೆ, ದತ್ತಾಂಶ ಸಂಗ್ರಹಣೆ ನೆಪವೊಡ್ಡಿ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಮತ್ತೊಂದು ಆಯೋಗ ರಚಿಸಿರುವುದು ಅನಾವಶ್ಯಕ. ಇದು ಕಾಲಹರಣ ಮಾಡುವ ತಂತ್ರವಾಗಿದೆ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಆರೋಪಿಸಿದರು.