ಗ್ರಾಮೀಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸಿ: ದೇವಮ್ಮಶೃಂಗೇರಿ, ಪ್ರಾಚೀನ ಕಾಲದಿಂದಲೂ ನಮ್ಮ ಪೂರ್ವಿಕರಿಂದ ಬಳುವಳಿಯಾಗಿ ಬಂದಿರುವ ಗೃಹ, ಕರಕುಶಲ, ಗುಡಿ ಕೈಗಾರಿಕೆಗಳು ಬೆರಳಣಿಯಷ್ಟು ಪ್ರಮಾಣದಲ್ಲಿ ಇಂದಿಗೂ ಉಳಿದುಕೊಂಡು ಬಂದಿದ್ದರೂ, ಪ್ರೋತ್ಸಾಹವಿಲ್ಲದೆ ಅವನತಿಯ ಅಂಚಿಗೆ ತಲುಪುತ್ತಿವೆ. ಇವುಗಳನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬೇಗಾರು ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ದೇವಮ್ಮ ಹೇಳಿದರು.