ಜನಸಂಪರ್ಕ ಸಭೆಗಳು ಜನರ ಸಮಸ್ಯೆ ಪರಿಹರಿಸಬೇಕು: ತಮ್ಮಯ್ಯಚಿಕ್ಕಮಗಳೂರು, ಜನಸಂಪರ್ಕ ಸಭೆಗಳು ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಭೆಗಳಾಗಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ. ಹಿರೇಕೊಳಲೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಜನಸಂಪರ್ಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಭಾಗದಿಂದ ತಾಲೂಕು, ಜಿಲ್ಲಾ ಕೇಂದ್ರಕ್ಕೆ ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ಬರುವುದನ್ನು ತಡೆಯುವ ಉದ್ದೇಶದಿಂದ ತಾಲೂಕು ಅಧಿಕಾರಿಗಳ ಮೂಲಕ ಆಡಳಿತ ವ್ಯವಸ್ಥೆಯನ್ನು ಜನರ ಮನೆಯ ಬಾಗಿಲಿಗೆ ತರಲು ಜನಸಂಪರ್ಕ ಸಭೆ ನಡೆಸಿ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲಾಗುತ್ತಿದೆ ಎಂದರು