ಸುಳಿವು ಸಿಕ್ಕ ಹತ್ತೇ ದಿನದಲ್ಲಿ ವಿಕ್ರಂಗೌಡ ಎನ್ಕೌಂಟರ್ಇದೇ ನವೆಂಬರ್ ಮೊದಲ ವಾರ ಪಶ್ಚಿಮಘಟ್ಟದಲ್ಲಿ ಮತ್ತೆ ನಕ್ಸಲೀಯರ ಚಲನವಲನ ಶುರುವಾಗಿದೆ ಎಂಬ ಮಾಹಿತಿ ನಕ್ಸಲ್ ನಿಗ್ರಹ ಪಡೆಗೆ ಸಿಕ್ಕಿತ್ತು. 2003ರ ನವೆಂಬರ್ 17 ರಂದು ಮೊದಲ ಬಾರಿಗೆ ಎನ್‌ಕೌಂಟರ್ ಆಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಈದು ಗ್ರಾಮದ ಸುತ್ತಮುತ್ತ ನಕ್ಸಲೀಯರು ಓಡಾಡುತ್ತಿದ್ದರೆಂಬ ಮಾಹಿತಿ ಸಿಕ್ಕಿತ್ತು. ಆಗ ಕೂಡಲೇ ಎಎನ್‌ಎಫ್ ಪಡೆ ಚುರುಕುಗೊಂಡಿತು. ಹಲವೆಡೆ ಪರಿಶೀಲನೆ ಜತೆಗೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿರುವ ಎಲ್ಲಾ 17 ನಕ್ಸಲ್ ನಿಗ್ರಹ ಪಡೆಯ ಸಿಬ್ಬಂದಿಗಳು ಕಾರ್ಯಾಚರಣೆ ಚುರುಕುಗೊಳಿಸಿದರು.