ಮಲೆನಾಡಲ್ಲಿ 16 ವರ್ಷದ ಬಳಿಕ ನಕ್ಸಲ್ ಶಸ್ತ್ರ ಪತ್ತೆಮಲೆನಾಡಿನಲ್ಲಿ ಹದಿನಾರು ವರ್ಷಗಳ ಬಳಿಕ ಮತ್ತೆ ನಕ್ಸಲರ ಹೆಜ್ಜೆಗುರುತು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೊಪ್ಪ ತಾಲೂಕಿನ ಕಡೇಗುಂದಿ ಗ್ರಾಮದ ಅರಣ್ಯ ವ್ಯಾಪ್ತಿಯ ಒಂಟಿ ಮನೆಗೆ ನಕ್ಸಲೀಯರು ಬಂದು ಹೋಗಿದ್ದು ದೃಢಪಟ್ಟಿದ್ದು, ಕೂಂಬಿಂಗ್ ಕಾರ್ಯಾಚರಣೆ ವೇಳೆ ಈ ಪ್ರದೇಶದಲ್ಲಿ ಮೂರು ಬಂದೂಕು ಹಾಗೂ ಮದ್ದುಗುಂಡುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.