ದತ್ತಮಾಲಾ ಅಭಿಯಾನ: ಬಂದೋಬಸ್ತ್‌ಗೆ 1600 ಕ್ಕೂ ಹೆಚ್ಚು ಪೊಲೀಸರ ನಿಯೋಜನೆಚಿಕ್ಕಮಗಳೂರು, ಶ್ರೀರಾಮ ಸೇನೆ ಹಮ್ಮಿಕೊಂಡಿರುವ ದತ್ತಮಾಲಾ ಅಭಿಯಾನಕ್ಕೆ ಕೊನೆ ದಿನವಾದ ಭಾನುವಾರ ವಿವಿಧ ಕಾರ್ಯಕ್ರಮಗಳ ನಡುವೆ ತೆರೆ ಬೀಳಲಿದೆ.ಭಾನುವಾರ ಬೆಳಿಗ್ಗೆ ಚಿಕ್ಕಮಗಳೂರಿನಲ್ಲಿ ಧಾರ್ಮಿಕ ಸಭೆ, ಶೋಭಾಯಾತ್ರೆ ನಡೆಯಲಿದೆ. ಬಳಿಕ ದತ್ತಪೀಠಕ್ಕೆ ತೆರಳಲಿರುವ ಭಕ್ತರು ದತ್ತಪಾದುಕೆಗಳ ದರ್ಶನ ಪಡೆಯಲಿದ್ದಾರೆ. ಬಂದೋ ಬಸ್ತಿಗಾಗಿ ಸುಮಾರು 1600 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಳನ್ನು ಜಿಲ್ಲೆಯಾದ್ಯಂತ ನಿಯೋಜನೆ ಮಾಡಲಾಗಿದೆ.