ದಲಿತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ, ಹಲ್ಲೆ ನಡೆಸಿದ ಅರಣ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹನರಸಿಂಹರಾಜಪುರ, ತಾಲೂಕಿನ ಬೈರಾಪುರ-ಆಲ್ದರ ಗ್ರಾಮದ ದಲಿತ ಮುಖಂಡ, ಸಾಮಾಜಿಕ ಹೋರಾಟಗಾರ ಚಿತ್ರಪ್ಪ ಯರಬಾಳ ಅವರ ಮೇಲೆ ಸುಳ್ಳು ಕೇಸು ದಾಖಲಿಸಿ, ಅವರ ವೃದ್ಧ ತಂದೆ ಮೇಲೆ ಹಲ್ಲೆ ಮಾಡಿದ ಉಂಬಳೈಬೈಲು ವಲಯ ಅರಣ್ಯಾಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ದಲಿತ ಮುಖಂಡ ಎಚ್.ಎಂ.ಶಿವಣ್ಣ ಆಗ್ರಹಿಸಿದರು.