ಶೃಂಗೇರಿ ಕ್ಷೇತ್ರದಲ್ಲಿ ಅಭಿವೃದ್ದಿ ಶೂನ್ಯ:ಮಾಜಿ ಸಚಿವ ಡಿ.ಎನ್.ಜೀವರಾಜ್.ಶೃಂಗೇರಿ, ಕ್ಷೇತ್ರದಲ್ಲಿ ಅಭಿವೃದ್ಧಿಯಿಲ್ಲ. ಆಡಳಿತ ಕುಸಿದು ಬಿದ್ದಿದೆ. ಆಸ್ಪತ್ರೆಗೆ ಹೋದರೆ ವೈದ್ಯರಿಲ್ಲದೇ ಸಾಯುವಂತ ಪರಿಸ್ಥಿತಿ, ಜಮೀನಿಗೆ ಹೋದರೆ ಆನೆಯಿಂದ ತುಳಿಸಿಕೊಳ್ಳುವ, ಹಾಸ್ಟೇಲುಗಳಲ್ಲಿ ನೇಣು ಹಾಕಿಕೊಳ್ಳುವ ಸ್ಥಿತಿ. ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯ, ದ್ವೇಷದ ರಾಜಕಾರಣ ತಾಂಡವಾಡುತ್ತಿದೆ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಆಕ್ರೋಶ ವ್ಯಕ್ತಪಡಿಸಿದರು.