ಕಂದಾಯ ಇಲಾಖೆಯಲ್ಲಿ ಸಮಸ್ಯೆ: ರೈತರ ಪರದಾಟಚಿಕ್ಕಮಗಳೂರು, ಕಂದಾಯ ಇಲಾಖೆಯಲ್ಲಿನ ಕೆಲವು ನಿಯಮದಿಂದಾಗಿ ರೈತರು ಪರದಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜನಪ್ರತಿ ನಿಧಿಗಳು, ಹೋರಾಟಗಾರರ ಹಾಗೂ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಬೇಕು. ಇಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಾಗುವುದು ಎಂದು ಕಸ್ತೂರಿರಂಗನ್ ವರದಿ ವಿರೋಧಿ ಮತ್ತು ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ವಿರೋಧಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್. ವಿಜಯಕುಮಾರ್ ಆಗ್ರಹಿಸಿದ್ದಾರೆ.