ಬ್ರಾಹ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಶೃಂಗೇರಿ ಶಾರದಾಂಬೆಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದ ಎರಡನೇ ದಿನವಾದ ಶುಕ್ರವಾರ ಪೀಠದ ಅಧಿದೇವತೆ ಶ್ರೀ ಶಾರದಾಂಬೆಗೆ ಬ್ರಾಹ್ಮಿ ಅಲಂಕಾರ ಮಾಡಿ ಸಿಂಗರಿಸಲಾಗಿತ್ತು. ಕೈಯಲ್ಲಿ ,ಅಕ್ಷರಮಾಲೆ, ಪುಸ್ತಕ, ಪಾಶ ಮತ್ತು ಚಿನ್ಮುದ್ರೆಗಳನ್ನು ಧರಿಸಿ ಹಂಸವಾಹನರೂಢಳಾದ ಶಾರದೆ ಅಲಂಕಾರ ನಯನ ಮನೋಹರವಾಗಿತ್ತು.