ತರೀಕೆರೆ ಪುರಸಭೆಯಿಂದ ₹4.37 ಲಕ್ಷ ಉಳಿತಾಯ ಬಜೆಟ್ ಮಂಡನೆತರೀಕೆರೆ, ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷ ವಸಂತಕುಮಾರ್ ಅಧ್ಯಕ್ಷತೆಯಲ್ಲಿ ನಡೆದ 2025-26ನೇ ಸಾಲಿನ ಆಯ-ವ್ಯಯದಲ್ಲಿ ₹4.37 ಲಕ್ಷ ಉಳಿತಾಯ ಬಜೆಟ್ ಮಂಡಿಸಲಾಯಿತು.2025-26ನೇ ಸಾಲಿನ ಆಯವ್ಯಯ ಮಂಡಿಸಿ ಮಾತನಾಡಿದ ಅಧ್ಯಕ್ಷ ವಸಂತಕುಮಾರ್, ಮೂಲ ಸೌಲಭ್ಯಗಳಿಂದ ವಂಚಿತ ವಾದ ಸರ್ಕಾರಿ ಶಾಲೆಗಳು, ಅಂಗನವಾಡಿ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಗೃಹ ನಿರ್ಮಾಣ ಮತ್ತು ಕಟ್ಟಡ ದುರಸ್ಥಿಗೆ ₹೧೫ ಲಕ್ಷ ಮೀಸಲಿರಿಸಲಾಗಿದೆ. ಪಟ್ಟಣದಲ್ಲಿರುವ ಮೇಲ್ಮಟ್ಟದ ಜಲಸಂಗ್ರಹಗಾರಗಳನ್ನು ವೈಜ್ಞಾನಿಕವಾಗಿ ಸ್ವಚ್ಛಗೊಳಿಸಲು ₹೧೧ ಲಕ್ಷ ಕಾಯ್ದಿರಿಸಿರುವುದು ಮಾತ್ರವಲ್ಲ, ಬರ ನಿರ್ವಹಣೆಗೆ ₹೨೦ ಲಕ್ಷ ಆಯವ್ಯಯದಲ್ಲಿ ಮೀಸಲಿಟ್ಟಿದೆ ಎಂದು ಮಾಹಿತಿ ನೀಡಿದರು.