ದೈಹಿಕ ಶಿಕ್ಷಕರಿಲ್ಲದ ಶಾಲೆ ಮಕ್ಕಳ ಕ್ರೀಡಾ ಸಾಧನೆಗೆ ಪ್ರಶಂಸೆಕೊಪ್ಪ, ತಾಲೂಕಿನ ಬಸರಿಕಟ್ಟೆಯ ಸದ್ಗುರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಯಪುರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ದೈಹಿಕ ಶಿಕ್ಷಕರಿಲ್ಲದ ಲೋಕನಾಥಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಒಟ್ಟು೧೦ ಬಹುಮಾನ ಪಡೆದು, ಎಂಟು ಕ್ರೀಡೆಗಳಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುವುದು ಪ್ರಶಂಸೆಗೆ ಪಾತ್ರವಾಗಿದೆ.