ಜಾನಪದ ಕಲೆ, ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆ: ಶೈಲಜಾಶೃಂಗೇರಿ, ಜಾನಪದ ಕಲೆ, ಸಂಸ್ಕೃತಿ ಪರಂಪರೆ ನಮ್ಮ ಪೂರ್ವಿಕರಿಂದ ಬಂದ ಬಳುವಳಿ. ಈ ಸಂಸ್ಕೃತಿ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸಿಕೊಂಡು ಹೋಗುವ ಮಹತ್ತರ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಶೈಲಜಾ ರತ್ನಾಕರ ಹೆಗ್ಡೆ ಹೇಳಿದರು.