ಜಿಲ್ಲಾ ಮಟ್ಟದ ಶಿಕ್ಷಕರ ಪ್ರಶಸ್ತಿ ಪ್ರಕಟ: 24 ಮಂದಿಗೆ ಪ್ರಶಸ್ತಿಈ ಬಾರಿ ಜಿಲ್ಲಾ ಮಟ್ಟದ ಶಿಕ್ಷಕರ ಪ್ರಶಸ್ತಿ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ 8 ಬ್ಲಾಕ್‌ಗಳಿಗೆ ತಲಾ ಓರ್ವರಂತೆ 24 ಶಿಕ್ಷಕರನ್ನು ಆಯ್ಕೆ ಮಾಡಿದೆ. ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆ ವಿಭಾಗಗಳಲ್ಲಿ ತಲಾ 8 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಿದ್ದು, ಅವರಿಗೆ ಸೆ.5 ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ದಿನದಂದು ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಈ ಪ್ರಶಸ್ತಿಯು ₹5000 ನಗದು ಹೊಂದಿದೆ.