ಶಾಂತಿಯುತವಾಗಿ ಹಬ್ಬ ಆಚರಿಸಲು ಮನವಿತರೀಕೆರೆ, ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬೇಕೆಂದು ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮನವಿ ಮಾಡಿದ್ದಾರೆ.ತಾಲೂಕು ಆಡಳಿತದಿಂದ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ, ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಹಿನ್ನಲೆಯಲ್ಲಿ ಏರ್ಪಡಿಸಿದ್ದ ಪೂರ್ವಬಾವಿ ಶಾಂತಿ ಸಭೆಯಲ್ಲಿ ಮಾತನಾಡಿ, ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗಳ ಸಭೆ ನಡೆಸಿ ನೀಡಿದ ಸೂಚನೆಯಂತೆ ತಾಲೂಕು ಮಟ್ಟದಲ್ಲಿ ವಿವಿಧ ಇಲಾಖೆ ಮತ್ತು ಸಂಘಟನೆಗಳ ಸಭೆ ಕರೆಯಲಾಗಿದೆ. ಸಾರ್ವಜನಿಕರ ಸಹಕಾರದಿಂದ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬೇಕೆಂದು ಮನವಿ ಮಾಡಿದರು.