ಸರ್ಕಾರಿ ನೌಕರರಿಗೆ ರಾಜ್ಯದ 8 ಕೋಟಿ ಜನರ ಜವಾಬ್ದಾರಿ: ನ್ಯಾ.ಕೆ.ಎನ್.ಫಣೀಂದ್ರಚಿಕ್ಕಮಗಳೂರು, ರಾಜ್ಯ ಸರ್ಕಾರಿ ನೌಕರರ ಭುಜದ ಮೇಲೆ ಸುಮಾರು 8 ಕೋಟಿ ಜನಸಾಮಾನ್ಯರ ಸಮಸ್ಯೆಗಳ ಜವಾಬ್ದಾರಿ ಇದ್ದು, ಕರ್ತವ್ಯ ಪ್ರಜ್ಞೆಯಿಂದ, ಜಾಗರೂಕತೆಯಿಂದ ಕಾರ್ಯ ನಿರ್ವಹಿಸುವುದು ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಕರ್ತವ್ಯ ಎಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್ .ಫಣೀಂದ್ರ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.