ಚಿಕ್ಕಮಗಳೂರು ನಗರಸಭೆಗೆ ಸುಜಾತಾ ಅಧ್ಯಕ್ಷೆ , ಅನು ಉಪಾಧ್ಯಕ್ಷೆಚಿಕ್ಕಮಗಳೂರು, ಚಿಕ್ಕಮಗಳೂರು ನಗರಸಭೆ ಅಧ್ಯಕ್ಷರಾಗಿ ಸುಜಾತಾ ಶಿವಕುಮಾರ್, ಉಪಾಧ್ಯಕ್ಷರಾಗಿ ಅನು ಮಧುಕರ್ ಆಯ್ಕೆಯಾಗಿದ್ದಾರೆ.ನಗರಸಭೆಯಲ್ಲಿ ಗುರುವಾರ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಜೀತ್ ಕುಮಾರ್ ಅಧ್ಯಕ್ಷತೆಯಲ್ಲಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು. ಬೆಳಿಗ್ಗೆ 9 ರಿಂದ 11 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸುಜಾತಾ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದಿಂದ ಸಿ.ಎನ್. ಸಲ್ಮಾ ನಾಮಪತ್ರ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಅನು ಮಧುಕರ್ ಹಾಗೂ ಕಾಂಗ್ರೆಸ್ ಇಂದಿರಾ ಶಂಕರ್ ನಾಮಪತ್ರ ಸಲ್ಲಿಸಿದ್ದರು.