ಅರಣ್ಯ ಒತ್ತುವರಿ ತೆರವಿಗೆ ವಿರೋಧ : ಶೃಂಗೇರಿ ಕ್ಷೇತ್ರ ಬಂದ್ ಯಶಸ್ವಿ ಚಿಕ್ಕಮಗಳೂರು, ಅರಣ್ಯ ಒತ್ತುವರಿ ತೆರವು ಹಾಗೂ ರೈತ ವಿರೋಧಿ ನೀತಿಯನ್ನು ಖಂಡಿಸಿ ಮಲೆನಾಡು ನಾಗರಿಕ ರೈತ ಹಿತ ರಕ್ಷಣಾ ಸಮಿತಿ ಶನಿವಾರ ಕರೆ ನೀಡಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.ಶೃಂಗೇರಿ ವಿಧಾನ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎನ್.ಆರ್.ಪುರ, ಕೊಪ್ಪ ಹಾಗೂ ಶೃಂಗೇರಿ ತಾಲೂಕು ಕೇಂದ್ರಗಳು ಹಾಗೂ ಹೋಬಳಿ ಕೇಂದ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್‌ನಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿತ್ತು.