ಬೈ ಎಲೆಕ್ಷನ್‌ನಲ್ಲಿ ಗೆಲುವು: ಜಿಲ್ಲೆಯಾದ್ಯಂತ ಕಾಂಗ್ರೆಸ್ ವಿಜಯೋತ್ಸವ ಚಿಕ್ಕಮಗಳೂರು, ಶಿಗ್ಗಾಂವಿ, ಚನ್ನಪಟ್ಟಣ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ತಾಲೂಕು ಕೇಂದ್ರಗಳಲ್ಲಿ ಶಾಸಕರ ಹಾಗೂ ಪಕ್ಷದ ಮುಖಂಡರ ನೇತೃತ್ವದಲ್ಲಿ ಶನಿವಾರ ವಿಜಯೋತ್ಸವ ಆಚರಿಸಲಾಯಿತು.