ವಿದ್ಯಾರ್ಥಿಗಳಲ್ಲಿ ಸೇವೆ ಸಲ್ಲಿಸುವ ಸಂಸ್ಕಾರ ಬೆಳೆಯಲಿ: ಪುಟ್ಟನಾಯ್ಕಚಿಕ್ಕಮಗಳೂರು, ವಿದ್ಯಾರ್ಥಿಗಳು ಕೇವಲ ಕಲಿಕೆಗಷ್ಟೇ ಸೀಮಿತವಾಗದೆ ಸಮಾಜದಲ್ಲಿ ಸೇವೆ ಸಲ್ಲಿಸುವ ಬಗ್ಗೆ ಸಂಸ್ಕಾರ ಕಲಿಯಬೇಕು. ಇದಕ್ಕೆ ಪೂರಕವಾಗಿ ಭಾರತ ಸೇವಾದಳ, ಎನ್‌ಎಸ್‌ಎಸ್, ಸ್ಕೌಟ್ ಆ್ಯಂಡ್ ಗೈಡ್ಸ್ ಕಾರ್ಯ ಶ್ಲಾಘನೀಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟನಾಯ್ಕ ಹೇಳಿದ್ದಾರೆ.