ಹೊಂಡ ಗುಂಡಿಗಳ ರಸ್ತೆ ದುರಸ್ತಿ ಪಡಿಸಿ ಚಿಕ್ಕಮಗಳೂರು-ಬಾಳೆಹೊನ್ನೂರು ಮುಖ್ಯರಸ್ತೆಯ ರಾಜ್ಯ ಹೆದ್ದಾರಿಯು ಕಳೆದ ಕೆಲವು ತಿಂಗಳುಗಳಿಂದ ತೀವ್ರ ಹೊಂಡ ಗುಂಡಿಗಳಿಂದ ಕೂಡಿದ್ದು, ಇದರಿಂದಾಗಿ ವಾಹನ ಚಾಲಕರು, ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಈ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಜನಪ್ರತಿನಿಧಿಗಳಿಗೆ ಪತ್ರ ಬರೆದಿದ್ದಾರೆ.