ಕಾಫಿ ನಾಡಲ್ಲಿ ತಗ್ಗಿದ ಮಳೆ : ಇಳಿಯದ ಹೊಳೆಚಿಕ್ಕಮಗಳೂರು ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬುಧವಾರ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿತ್ತು. ಆದರೆ, ಮಳೆಯ ಹಾನಿ ಮಾತ್ರ ಮುಂದುವರಿದಿದೆ. ಮಲೆನಾಡು ತಾಲೂಕುಗಳಾದ ಮೂಡಿಗೆರೆ, ಶೃಂಗೇರಿ, ಕೊಪ್ಪ, ಕಳಸ, ಎನ್.ಆರ್. ಪುರ, ಚಿಕ್ಕಮಗಳೂರು ಭಾಗದಲ್ಲಿ ಮಳೆರಾಯ ತನ್ನ ಅಬ್ಬರವನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಿದ್ದಾನೆ. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಬಹುತೇಕ ಪ್ರದೇಶಗಳಲ್ಲಿ ಬಿಸಿಲಿನ ವಾತಾವರಣ ಇತ್ತು. ನಂತರದಲ್ಲಿ ಮೋಡ ಕವಿದ ವಾತಾವರಣ, ಆಗಾಗ ತುಂತುರು ಮಳೆ ಮುಂದುವರಿದಿತ್ತು.