ಪ್ರತಿ ಪಕ್ಷಗಳಿಂದ ಸುಳ್ಳನ್ನು ಸತ್ಯ ಮಾಡುವ ಪ್ರಯತ್ನ : ಕೆ.ಜೆ. ಜಾರ್ಜ್ಚಿಕ್ಕಮಗಳೂರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಸತ್ಯಕ್ಕೆ ದೂರವಾದ ಆರೋಪ ಮಾಡಿದ ಪ್ರತಿಪಕ್ಷಗಳು, ಮುಖ್ಯಮಂತ್ರಿಗೆ ಉತ್ತರ ನೀಡಲೂ ಅವಕಾಶ ಕೊಡದೆ ಸುಳ್ಳನ್ನು ಸತ್ಯ ಮಾಡುವ ಪ್ರಯತ್ನ ನಡೆಸಿದವು ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದ್ದಾರೆ.