ಕೂಡಲೇ ಪರಿಹಾರ ಒದಗಿಸಲು ಸಚಿವ ಜಾರ್ಜ್ ಅಧಿಕಾರಿಗಳಿಗೆ ಸೂಚನೆಚಿಕ್ಕಮಗಳೂರು, ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಧಾರಾಕಾರ ಮಳೆ ಸುರಿದು ಮಲೆನಾಡು ಭಾಗದ ತಾಲೂಕುಗಳಾದ ಮೂಡಿಗೆರೆ, ಶೃಂಗೇರಿ, ಕಳಸ, ಕೊಪ್ಪ, ಎನ್.ಆರ್.ಪುರ ಹಾಗೂ ಚಿಕ್ಕಮಗಳೂರು ತಾಲೂಕುಗಳಲ್ಲಿ ಭಾರಿ ಹಾನಿ ಸಂಭವಿಸಿದೆ. ಹಲವು ಮನೆಗಳು ಧರೆಗುರುಳಿದ್ದು, ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.